ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರ್ಯಕ್ಕೆ ಸಶಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದೆ ಎಂದು ಭಾವಿಸಲಾಗಿದೆ
ಆಜಾದ್ ಹಿಂದ್ ಸೇನೆ
ಬಲಿಷ್ಠಗೊಂಡ ಆಜಾದ್ ಹಿಂದ್ ಸೇನೆಗೆ ದೌಡಾಯಿಸುತ್ತಿದ್ದ ನಿವೃತ್ತಯುದ್ಧ ಕೈದಿಗಳು. ಮುಂದಿನ ದಿನಗಳಲ್ಲಿ ಪಕ್ವ ಸೈನ್ಯವಾಗಿ ರೂಪುಗೊಂಡ (ಐ.ಎನ್.ಎ).[೧] ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಪಡೆದ ಬೋಸ್‌ರಿಂದ ಆರ್ಜೀ-ಹುಕುಮಂತ್-ಎ-ಆಜಾದ್ ಹಿಂದ್ (ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ) ಸ್ಥಾಪನೆ; ಐಎನ್‌ಎಯ ಕಮಾಂಡರ್ ಇನ್ ಚೀಫ್ ಆಗಿ ಬೋಸ್. ೧೯೪೫ರ ಆಗಸ್ಟ್ ೧೮ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್‌ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನ. ಆ ಕುರಿತು ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇದೆ. ಅನ್ವೇಷಣಾ ಸಮಿತಿ ನೇಮಿಸಿದರೂ, ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದಾರೆಂದೇ, ತಿಳಿದಿದ್ದರು.
ಬೋಸರು ಆಗಾಗ ಹೇಳುತ್ತಿದ್ದರು "ನೀವು ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂ ಕೊಡುವಂಥ ಸರಕಲ್ಲ ಅದು ನಾವು ಪಡೆದುಕೊಳ್ಳಬೇಕಾದದ್ದು"
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸಿದ ಇವರು, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ತತ್ವಗಳನ್ನು ಒಪ್ಪದೆ ಪಕ್ಷದಿಂದ ಹೊರಬಂದರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿದರು. ಇವರು ಟೈವಾನ್‍ನಲ್ಲಿ ೧೯೪೫ರ ಆಗಸ್ಟ್ ೧೮ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಭಾವಿಸಲಾಗಿದೆ. ಆದರೆ ಈ ಘಟನೆ ವಿವಾದಿತವಾಗಿದೆ.
ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು 1945ರ ಆಗಸ್ಟ್ 18ರಂದು ತೈವಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲೇ ಮೃತಪಟ್ಟಿದ್ದಾರೆ ಎಂದು ಜಪಾನ್ ಸರ್ಕಾರ ಬಿಡುಗಡೆ ಮಾಡಿರುವ ವರದಿ ತಿಳಿಸಿವೆ.ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು 1945ರ ಆಗಸ್ಟ್ 18ರಂದು ತೈವಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲೇ ಮೃತಪಟ್ಟಿದ್ದಾರೆ ಎಂದು ಜಪಾನ್ ಸರ್ಕಾರ ಬಿಡುಗಡೆ ಮಾಡಿರುವ ವರದಿ ತಿಳಿಸಿವೆ.[೨] ಬೋಸ್ ಅವರ ಸಾವಿನ ಕುರಿತ 60 ವರ್ಷದ ಹಳೆಯ ವರ್ಗಿಕೃತ ದಾಖಲೆಗಳನ್ನು ಜಪಾನ್ ಸರ್ಕಾರ ಗುರುವಾರ ಸಾರ್ವಜನಿಕವಾಗಿ ಬಹಿರಂಗಪಡಿಸಿದೆ. ಸುಭಾಷ್ ಸಾವಿನ ಕುರಿತ ದಾಖಲೆಗಳಿಗಾಗಿಯೇ ರೂಪಿಸಲಾಗಿರುವ ‘ಬೋಸ್‌ಫೈಲ್ಸ್.ಇನ್ಫೊ’ ವೆಬ್‌ಸೈಟ್‌ನಲ್ಲಿ ಮೊದಲ ಬಾರಿ ಈ ದಾಖಲೆಗಳನ್ನು ಉಲ್ಲೇಖಿಸಿ ವರದಿ ಪ್ರಕಟಿಸಲಾಗಿದೆ. ಸುಭಾಷ್ ಚಂದ್ರ ಬೋಸ್ ಅವರ ಸಾವಿಗೆ ಕಾರಣಗಳು ಮತ್ತು ಇತರ ವಿಷಯಗಳು’ ಶೀರ್ಷಿಕೆ ಅಡಿಯಲ್ಲಿ ಈ ಬಗ್ಗೆ ವರದಿಯನ್ನು ಪ್ರಕಟಿಸಲಾಗಿದೆ. ಬೋಸ್ ಅವರ ಸಾವಿನ ಕುರಿತು 1956ರಲ್ಲೇ ವರದಿಯನ್ನು ಸಿದ್ಧಪಡಿಸಿ ಟೊಕಿಯೊದಲ್ಲಿನ ಭಾರತೀಯ l ಸಲ್ಲಿಸಲಾಗಿತ್ತು. ಆದರೆ, ವರ್ಗೀಕೃತ ದಾಖಲೆಗಳಾಗಿದ್ದರಿಂದ ಇಲ್ಲಿಯವರೆಗೂ ಭಾರತ ಅಥವಾ ಜಪಾನ್ ಈ ವರದಿಯನ್ನು ಬಹಿರಂಗಪಡಿಸಿರಲಿಲ್ಲ’ ಎಂದು ವೆಬ್‌ಸೈಟ್ ತಿಳಿಸಿದೆ. ಜಪಾನ್ ಭಾಷೆಯಲ್ಲಿನ 7 ಪುಟಗಳು ಮತ್ತು ಇಂಗ್ಲಿಷ್‌ಗೆ ಭಾಷಾಂತರಿಸಿದ 10 ಪುಟಗಳ ವರದಿ ಇದಾಗಿದೆ.
1945ರ ಆಗಸ್ಟ್ 18ರಂದು ಬೋಸ್ ಅವರಿದ್ದ ವಿಮಾನ ಅಪಘಾತಕ್ಕೀಡಾಯಿತು. ಅದೇ ದಿನ ಸಂಜೆ ತೈಪೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೋಸ್ ಅವರು ಪ್ರಯಾಣಿಸುತ್ತಿದ್ದ ವಿಮಾನ, ಹಾರಾಟ ಆರಂಭಿಸಿದ ತಕ್ಷಣ ನೆಲಕ್ಕೆ ಅಪ್ಪಳಿಸಿತು. ಆಗ ಬೋಸ್ ಅವರು ತೀವ್ರ ಗಾಯಗೊಂಡರು. ಮಧ್ಯಾಹ್ನ 3 ಗಂಟೆಗೆ ತೈಪೆಯ ಸೇನಾ ಆಸ್ಪತ್ರೆಗೆ ಬೋಸ್ ಅವರನ್ನು ದಾಖಲಿಸಲಾಯಿತು. ಬಳಿಕ 7 ಗಂಟೆಗೆ ಅವರು ಮೃತಪಟ್ಟರು. ಆಗಸ್ಟ್ 22ರಂದು ಬೋಸ್ ಅವರ ಅಂತ್ಯಕ್ರಿಯೆ ನಡೆಸಲಾಯಿತು’ ಎಂದು ವರದಿ ತಿಳಿಸಿದೆ. ವಿಮಾನ ಅಪಘಾತಕ್ಕೀಡಾದ ವಿವರಗಳನ್ನು ಸಹ ವರದಿಯಲ್ಲಿ ತಿಳಿಸಲಾಗಿದೆ. ವಿಮಾನ ಹಾರಾಟ ಆರಂಭಿಸಿ 20 ಮೀಟರ್ ಎತ್ತರಕ್ಕೆ ಹೋದ ಬಳಿಕ ಎಡಬದಿಯ ರೆಕ್ಕೆಗೆ ಧಕ್ಕೆಯಾಯಿತು. ಬಳಿಕ ಎಂಜಿನ್‌ಗೂ ಧಕ್ಕೆಯಾಗಿ ಕೆಲವೇ ಕ್ಷಣಗಳಲ್ಲಿ ವಿಮಾನ ಬೆಂಕಿಗೆ ಆಹುತಿಯಾಯಿತು. ಈ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಬೋಸ್ ಅವರು ಸಾಹಸಪಟ್ಟು ವಿಮಾನದಿಂದ ಕೆಳಗೆ ಇಳಿದರು (ಲಂಡನ್ ನಿಂದ ಬಂದ ವರದಿ). (ಜಪಾನ್ ಸರ್ಕಾರ ಬಿಡುಗಡೆ ಮಾಡಿರುವ ಈ ವರದಿಯು ಭಾರತ ಸರ್ಕಾರ 1956ರಲ್ಲಿ ರಚಿಸಿದ್ದ ಶಹ ನವಾಜ್ ಖಾನ್ ನೇತೃತ್ವದ ತನಿಖಾ ವರದಿಯನ್ನು ಅನುಮೋದಿಸುತ್ತದೆ ಎಂದು ವೆಬ್‌ಸೈಟ್ ತಿಳಿಸಿದೆ



No comments:
Post a Comment